ADVERTISEMENT

ಚಾಮರಾಜನಗರ: ಮತ್ತೆ ಹೆಚ್ಚಿದ ಕೋವಿಡ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 12:46 IST
Last Updated 1 ಡಿಸೆಂಬರ್ 2020, 12:46 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳ ಕಂಡು ಬಂದಿದೆ. 18 ಪ್ರಕಣಗಳು ವರದಿಯಾಗಿವೆ. 19 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 66 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 38 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 11 ಮಂದಿ ಐಸಿಯುನಲ್ಲಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 6,346 ಮಂದಿಗೆ ಸೋಂಕು ತಗುಲಿದೆ. 6,152 ಮಂದಿ ಗುಣಮುಖರಾಗಿದ್ದಾರೆ. 108‌ ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ.

ಮಂಗಳವಾರ 1,401 ಮಂದಿಯ ಕೋವಿಡ್‌ ಪ‍ರೀಕ್ಷಾ ವರದಿ ಬಂದಿದ್ದು, 1,386 ಜನರ ವರದಿ ನೆಗೆಟಿವ್‌ ಬಂದಿವೆ. 15 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಎರಡು ಪ್ರಕರಣ ಮೈಸೂರು ಹಾಗೂ ಒಂದು ಪ್ರಕರಣ ಬೆಂಗಳೂರಿನಲ್ಲಿ ದೃಢಪಟ್ಟಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.