
ಹನೂರು (ಚಾಮರಾಜನಗರ ಜಿಲ್ಲೆ): ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧೆಯನ್ನು ಸಕಾಲದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ದೊರೆಯದ ಕಾರಣ, ಸಂಬಂಧಿಕರು ಡೋಲಿ ಕಟ್ಟಿಕೊಂಡು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ ಘಟನೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ನಡೆದಿದೆ.
ಕಾಡುಹೊಲ ಗ್ರಾಮದ ದುಂಡಮ್ಮ(55) ಏಕಾಏಕಿ ಅಸ್ವಸ್ಥಗೊಂಡಿದ್ದು ಸಂಬಂಧಿಗಳು ಆಂಬುಲೆನ್ಸ್ಗೆ ಕರೆ ಮಾಡಿ ಕರೆದೊಯ್ಯುವಂತೆ ಮನವಿ ಮಾಡಿದ್ದಾರೆ. ಆದರೆ, ಆಂಬುಲೆನ್ಸ್ ಸಮಯಕ್ಕೆ ಸರಿಯಾಗಿ ಬಾರದಿದ್ದರಿಂದ ಡೋಲಿಯಲ್ಲಿ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ನಂತರ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲೂ ಸರ್ಕಾರಿ ಆಂಬುಲೆನ್ಸ್ ದೊರೆಯದೆ, ಖಾಸಗಿ ಆಂಬುಲೆನ್ಸ್ನಲ್ಲಿ ತಮಿಳುನಾಡಿನ ಮೆಟ್ಟೂರಿಗೆ ಕರೆದೊಯ್ದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.