ಹನೂರು: ಇಲ್ಲಿನ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಎಸ್. ಅನಿಲ್ ಕುಮಾರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕಿ ಪುಷ್ಪಲತಾ ಶಿವಮಲ್ಲು ಆಯ್ಕೆಯಾದರು.
ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮೇ 13ರಂದು ಚುನಾವಣೆ ನಡೆದು ಸಾಲಗಾರರಲ್ಲದ ಕ್ಷೇತ್ರದಿಂದ ಮಾಜಿ ಶಾಸಕ ಆರ್. ನರೇಂದ್ರ, ಸಾಲಗಾರರ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಶ್ರೀನಿವಾಸ್ ಗೌಡ, ನಟರಾಜು, ಅನಿಲ್ ಕುಮಾರ್, ಕೆಂಚನಾಯ್ಕ, ಪುಷ್ಪಲತಾ, ಶಿವಮಲ್ಲು, ನಾಗರತ್ನಮ್ಮ, ಬಿಜೆಪಿ–ಜೆಡಿಎಸ್ ಮೈತ್ರಿ ಪಕ್ಷದಿಂದ ರಾಜುಗೌಡ, ಲಿಂಗೇಗೌಡ, ರಂಗಸ್ವಾಮಿ ನಾಯ್ಡು, ಗೋವಿಂದ, ಮಹದೇಶ್ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.
ಮೇ 29ರಂದು ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ಕಾಂಗ್ರೆಸ್ ಪಕ್ಷದ ಬೆಂಬಲಿತ ನಿರ್ದೇಶಕ ಅನಿಲ್ ಕುಮಾರ್ ಹಾಗೂ ಬಿಜೆಪಿ– ಜೆಡಿಎಸ್ ಮೈತ್ರಿ ಪಕ್ಷದಿಂದ ಲಿಂಗೇಗೌಡ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕಿ ಪುಷ್ಪಲತಾ, ಮೈತ್ರಿ ಪಕ್ಷದಿಂದ ರಂಗಸ್ವಾಮಿ ನಾಯ್ಡು ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಯಾರೊಬ್ಬರು ವಾಪಸ್ ಪಡೆಯದೆ ಇದ್ದಿದ್ದರಿಂದ ಅಂತಿಮವಾಗಿ ಚುನಾವಣೆ ನಡೆದು ಏಳು ಮತ ಪಡೆದ ಅನಿಲ್ ಕುಮಾರ್ ಅಧ್ಯಕ್ಷರಾಗಿ, ಎಂಟು ಮತ ಪಡೆದ ಪುಷ್ಪಲತಾ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರು ಮುಖಂಡರುಗಳು ಮಾಜಿ ಶಾಸಕ ಆರ್.ನರೇಂದ್ರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜಯ ಘೋಷ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ನೂತನ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷ ಪುಷ್ಪಲತಾ, ನಿರ್ದೇಶಕರಾದ ಶ್ರೀನಿವಾಸ್ ಗೌಡ, ಕೆಂಚ ನಾಯ್ಕ, ನಾಗರತ್ನಮ್ಮ, ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್, ಹರೀಶ್, ನವೀನ್, ಮಾಜಿ ಸದಸ್ಯ ಬಸವರಾಜು, ತಾ.ಪಂ ಮಾಜಿ ಅಧ್ಯಕ್ಷ ವೆಂಕಟರಮಣ ನಾಯ್ಡು, ಮುಖಂಡರಾದ ನಾಗೇಂದ್ರ, ರಮೇಶ್ ನಾಯ್ಡು, ರವೀಂದ್ರ, ಪ್ರದೀಪ್ ಕುಮಾರ್, ಮಾದೇಶ್, ರವಿ, ಲಿಂಗ ಶೆಟ್ಟಿ, ವೆಂಕಟೇಶ್, ರಾಜು, ರಾಜೇಶ್, ಚೇತನ್ ದೊರೆರಾಜು, ಮಲ್ಲು, ಮರಿಗೌಡ, ಶಿವಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.