ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಲಕ್ಷ್ಮಿದೇವಿ ದೇವಸ್ಥಾನದ ಬಳಿಯ ಐದು ಮನೆಗಳ ಮೇಲೆಯೇ ಅಪಾಯಕಾರಿ ವಿದ್ಯುತ್ ಲೈನ್ ಹಾದುಹೋಗಿದ್ದು ಜೀವಹಾನಿಯಾಗುವ ಮುನ್ನ ತುರ್ತು ತೆರವುಗೊಳಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಮನೆಯ ಮೇಲೆಯೇ ಕೈಗೆಟುಕುವಂತೆ ವೈರ್‌ಗಳು ಹಾದುಹೋಗಿದ್ದು ನಿತ್ಯ ಜೀವಭಯದಲ್ಲಿ ಬದುಕಬೇಕಾಗಿದೆ. ಈಗಾಗಲೇ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮನೆಯ ಸಮೀಪದಲ್ಲೇ ವಿದ್ಯುತ್ ಪರಿವರ್ತಕ ಅಳವಡಿಸಲಾಗಿದೆ. ವಿದ್ಯುತ್ ತಂತಿಗಳನ್ನು ತೆರವುಗೊಳಿಸುವಂತೆ ಸೆಸ್ಕ್ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಮಳೆ ಬಂದಾಗ ವಿದ್ಯುತ್ ಸ್ಪರ್ಶದ ಭಯದಿಂದ ಮಹಡಿಯ ಮೇಲೆ ತಿರುಗಾಡಲು ಸಾಧ್ಯವಾಗುತ್ತಿಲ್ಲ. ಹೆಚ್ಚುವರಿ ಮಹಡಿ ನಿರ್ಮಾಣ ಮಾಡಲಾಗುತ್ತಿಲ್ಲ. ಅವಘಡಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ಟ್ರಾನ್ಸ್‌ಫರಂ ಹಾಗೂ ವಿದ್ಯುತ್ ತಂತಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರಾದ ಅರ್ಜುನ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.