ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭಾನುವಾತ ಕಾಡಾನೆಯ ಫೋಟೊ ತೆಗೆಯಲು ಹೋದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆದಿದೆ.
ಮಧುಮಲೈ ಅರಣ್ಯದ ಕಡೆಯಿಂದ ಬಂಡೀಪುರದ ಕಡೆಗೆ ಬರುವ ಸಂದರ್ಭದಲ್ಲಿ ಕೆಕ್ಕನಹಳ್ಳ ಅರಣ್ಯ ಪ್ರದೇಶದ ಬಳಿ ಮರಿಯೊಂದಿಗೆ ಇದ್ದ ಆನೆಯ ಪೋಟೋ ತೆಗೆಯಲು ಹೋದಾಗ ದಾಳಿ ನಡೆದಿದೆ.
ದಾಳಿಯಿಂದ ಪ್ರಜ್ಞೆತಪ್ಪಿ ರಸ್ತೆಯಲ್ಲಿಯೇ ಬಿದ್ದಿದ್ದ ವ್ಯಕ್ತಿಯನ್ನು ಸಂಬಂಧಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅನೆಯ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.
ದಾಳಿಗೊಳಗಾದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದರು.
ಆನೆಗಳು ಮರಿಗಳೊಂದಿಗೆ ಇರುವಾಗ ಮನುಷ್ಯರನ್ನು ಕಂಡರೆ ದಾಳಿ ಮಾಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಮರಿಯ ರಕ್ಷಣೆ ಮಾಡಲು ಸಿಟ್ಟಿಗೇಳುವುದು ಸಹಜ, ಇಂತಹ ಸಂದರ್ಭದಲ್ಲಿ ಪ್ರವಾಸಿಗರು ಪೋಟೋ ತೆಗೆಯಲು ಮುಂದಾದಾಗಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.