ADVERTISEMENT

ಮಲೆಮಹದೇಶ್ವರ ವನ್ಯಧಾಮದಲ್ಲಿ ಗಂಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 28 ಮೇ 2020, 15:48 IST
Last Updated 28 ಮೇ 2020, 15:48 IST
ಆನೆಯ ಮೃತದೇಹವನ್ನು ಸಿಬ್ಬಂದಿ ಪರಿಶೀಲಿಸಿದರು
ಆನೆಯ ಮೃತದೇಹವನ್ನು ಸಿಬ್ಬಂದಿ ಪರಿಶೀಲಿಸಿದರು   

ಹನೂರು: ಮಲೆಮಹದೇಶ್ವರ ವನ್ಯಧಾಮದಲ್ಲಿ ಗುರುವಾರ ಗಂಡಾನೆಯ ಮೃತದೇಹ ಪತ್ತೆಯಾಗಿದೆ.

ಮಹದೇಶ್ವರಬೆಟ್ಟ ವನ್ಯಜೀವಿವಲಯದ ನೇರಳೆ ಮರದ ಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಆನೆಯ ಕಳೇಬರ ನೋಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‘ಆನೆಗೆ 40 ರಿಂದ 50 ವಯಸ್ಸಾಗಿರಬಹುದು. ಮೇಲ್ನೋಟಕ್ಕೆ ಸಹಜ ಸಾವಿನಂತೆ ಕಂಡು ಬರುತ್ತಿದೆ. ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು ಅವರು ಹೇಳಿದ್ದಾರೆ.

‌ನಾಲ್ಕನೇ ಸಾವು: ವನ್ಯಧಾಮದಲ್ಲಿ ಎರಡು ತಿಂಗಳ ಅವಧಿಯಲ್ಲಿ ಸತ್ತಿರುವ ನಾಲ್ಕನೇ ಆನೆ ಇದು. ಈ ಹಿಂದೆ ಒಂದು ಗಂಡಾನೆ ಸೇರಿ ಮೂರು ಆನೆಗಳು ಮೃತಪಟ್ಟಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.