ಹನೂರು: ಮಲೆಮಹದೇಶ್ವರ ವನ್ಯಧಾಮದಲ್ಲಿ 25 ವರ್ಷದ ಹೆಣ್ಣಾನೆಯೊಂದು ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ರಾಮಾಪುರ ವನ್ಯಜೀವಿ ವಲಯದ ಕುರಟ್ಟಿಹೂಸರು ಸಮೀಪದ ದೂಡ್ಡಭಾಗಿಮರದ ಹಳ್ಳದ ಗಸ್ತಿನಲ್ಲಿ ಸಿಬ್ಬಂದಿ ಗಸ್ತು ತಿರುಗುವಾಗ ಆನೆಯೊಂದು ಮೃತಪಟ್ಟಿರುವುದು ಕಂಡು ಬಂದಿದೆ. ಬಳಿಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ನೋಡಿದಾಗ ಆನೆ ಸುಮಾರು ವಾರದ ಹಿಂದೆ ಮೃತಪಟ್ಟಿರಬಹುದು ಎಂದು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಲಯ ಅರಣ್ಯಾಧಿಕಾರಿ ಉಮಾಪತಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಆನೆ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.