ಗುಂಡ್ಲುಪೇಟೆ: ಕಾರಿನ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಗಡಿಯಲ್ಲಿನ ಮುತ್ತಂಗ ಬಳಿ ನಡೆದಿದೆ.
ಬಂಡೀಪುರ ರಾಷ್ಟ್ರೀಯ ಹೆದ್ದಾರಿ-766ರ ಮೂಲೆಹೊಳೆ ಚೆಕ್ ಪೋಸ್ಟ್ ಮಾರ್ಗವಾಗಿ ಕಾರೊಂದರಲ್ಲಿ ಕೇರಳಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಕಾರಿನತ್ತ ಧಾವಿಸಿದ ಒಂಟಿ ಆನೆ ದಾಳಿಗೆ ಮುಂದಾಗಿದೆ. ಸಮಯ ಪ್ರಜ್ಞೆಯಿಂದ ಕಾರು ಚಾಲಕ ಜೋರಾಗಿ ಹಾರ್ನ್ ಮಾಡಿದ್ದಾನೆ. ಹಾರ್ನ್ ಸೌಂಡಿಗೆ ಹೆದರಿದ ಆನೆಯು ಹಿಂದಕ್ಕೆ ಸರಿದು ಹೋಗಿದೆ. ಇದರಿಂದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ದೃಶ್ಯವನ್ನು ಕಾರಿನಲ್ಲಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.