ADVERTISEMENT

ಕೊಳ್ಳೇಗಾಲ | ಆನೆ ದಂತ ವಶ; ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 23:35 IST
Last Updated 17 ಆಗಸ್ಟ್ 2024, 23:35 IST
ವಶಪಡಿಸಿಕೊಂಡಿರುವ ಆನೆ ದಂತ ಹಾಗೂ ಕಾರು
ವಶಪಡಿಸಿಕೊಂಡಿರುವ ಆನೆ ದಂತ ಹಾಗೂ ಕಾರು   

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರಿನಲ್ಲಿ ಆನೆ ದಂತಗಳನ್ನು ಸಾಗಿಸುತ್ತಿದ್ದ ಮೂವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಅಂಕನಶೆಟ್ಟಿಪುರದ ಶಿವಮೂರ್ತಿ(57), ತಮಿಳುನಾಡಿನ ತಿರುಪೂರು ಜಿಲ್ಲೆಯ ರವನಪುರಂ ಗ್ರಾಮದ ಶಿವಕುಮಾರ್ (44) ಹಾಗೂ ಅಂಡಿಪಾಳ್ಯಂ ಚಿನ್ನಕವುಂಡನ್ ಅಂತೋಣಿ (46) ಆರೋಪಿಗಳು.

ಬಂಧಿತರಿಂದ ಆನೆಯ 2 ದಂತ ಹಾಗೂ ಒಂದು ಕಾರು (ಟಿ.ಎನ್.59 ಸಿಆರ್. 1273) ಜಪ್ತಿ ಮಾಡಲಾಗಿದೆ.

ADVERTISEMENT

ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ದಂತಗಳ ಸಮೇತ ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಮುಂದೆ ಹಾಜರುಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.