ADVERTISEMENT

ರೋಟರಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ: ಶಸ್ತ್ರಚಿಕಿತ್ಸೆಗೆ 110 ಮಂದಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 2:31 IST
Last Updated 4 ಆಗಸ್ಟ್ 2025, 2:31 IST
ಚಾಮರಾಜನಗರದಲ್ಲಿ ಭಾನುವಾರ ರೋಟರಿ ಸಂಸ್ಥೆಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು
ಚಾಮರಾಜನಗರದಲ್ಲಿ ಭಾನುವಾರ ರೋಟರಿ ಸಂಸ್ಥೆಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು   

ಚಾಮರಾಜನಗರ: ರೋಟರಿ ಸಂಸ್ಥೆಯಿಂದ ಭಾನುವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ   ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ  195 ಮಂದಿ ತಪಾಸಣೆ ಮಾಡಿಸಿಕೊಂಡರು. ಹೆಚ್ಚಿನ ಸಮಸ್ಯೆ ಇದ್ದ 110 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಿ, ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲು ವ್ಯವಸ್ಥೆ ಮಾಡಲಾಯಿತು.

ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಕಣ್ಣುಗಳು ಮನುಷ್ಯನ ಬಹುಮುಖ್ಯ ಅಂಗಗಳಾಗಿದ್ದು ಕಣ್ಣಿನ ಆರೋಗ್ಯ ಜಾಗ್ರತೆಯಿಂದ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ರೋಟರಿ ಸಂಸ್ಥೆಯು ಪ್ರತಿ ತಿಂಗಳ ಮೊದಲ ಭಾನುವಾರದಂದು ಉಚಿತ ನೇತ್ರ ತಪಾಸಣಾ ಶಿಬಿರ ಅಯೋಜಿಸುತ್ತಿದ್ದು ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ADVERTISEMENT

ರೋಟರಿ ಸಂಸ್ಥಾಪಕ ಸದಸ್ಯ ಶ್ರೀನಿವಾಸಶೆಟ್ಟಿ, ಜಿ.ಆರ್.ಅಶ್ವಥ್ ನಾರಾಯಣ್, ಮಾಜಿ ಅಧ್ಯಕ್ಷ ನಾಗರಾಜು, ಕೆ.ಎಂ.ಮಹದೇವಸ್ವಾಮಿ, ಎ.ಶ್ರೀನಿವಾಸನ್, ಮುಂದಿನ ಸಾಲಿನ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಶ್ರೀನಿವಾಸ, ಅಂಕಶೆಟ್ಟಿ, ಮಾಯಾ ವೆಂಕಟೇಶ್, ಗುರುಸ್ವಾಮಿ, ನೇಮಿರಾಜ್, ಯೋಗಪ್ರಕಾಶ್, ಕಮಲ್ ರಾಜ್, ಸುರೇಶ್, ಪ್ರಭಾಕರ್,  ಪಿಆರ್‌ಒ ವಿಜಯಕಾಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.