ADVERTISEMENT

ಕೊಳ್ಳೇಗಾಲ: ಪರೀಕ್ಷೆ ಧೈರ್ಯವಾಗಿ ಎದುರಿಸಿ

‘ಸಾಧನಾ ಪಥ 100ರ ಗುರಿಯತ್ತ’ ಕಾರ್ಯಕ್ರಮದಲ್ಲಿ ಗುರುಶಾಂತಪ್ಪ ಬೆಳ್ಳುಂಡಗಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 2:34 IST
Last Updated 19 ಫೆಬ್ರುವರಿ 2026, 2:34 IST
<div class="paragraphs"><p>ಕೊಳ್ಳೇಗಾಲ ನಗರದ ಸಂತ ಫ್ರಾನ್ಸಿಸ್ ಅಸ್ಸಿಸಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ವಿಷಯ ಶಿಕ್ಷಕರ ವೇದಿಕೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ...</p></div>

ಕೊಳ್ಳೇಗಾಲ ನಗರದ ಸಂತ ಫ್ರಾನ್ಸಿಸ್ ಅಸ್ಸಿಸಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ವಿಷಯ ಶಿಕ್ಷಕರ ವೇದಿಕೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ...

   

ಕೊಳ್ಳೇಗಾಲ: ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.

ನಗರದ ಸಂತ ಫ್ರಾನ್ಸಿಸ್ ಅಸ್ಸಿಸಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ವಿಷಯ ಶಿಕ್ಷಕರ ವೇದಿಕೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಗಾಗಿ ‘ಪ್ರೇರಣಾ ಕಾರ್ಯಾಗರ’ ‘ಸಾಧನಾ ಪಥ 100ರ ಗುರಿಯತ್ತ’ ಎಂಬ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆ ಬರೆಯುವಾಗ ಯಾವುದರ ಬಗ್ಗೆಯೂ ಸಹ ಆಲೋಚನೆ ಮಾಡದೆ ಖುಷಿಯಿಂದ ಪರೀಕ್ಷೆಯನ್ನು ಬರೆಯಬೇಕು, ಆಗ ನಿಮ್ಮ ಜ್ಞಾಪನ ಶಕ್ತಿ ಮತ್ತಷ್ಟು ಹೆಚ್ಚುತ್ತದೆ. ಜೀವನದಲ್ಲಿ ನೀವು ಸಾಧನೆ ಮಾಡಿದರೆ ನಿಮ್ಮ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಮತ್ತಷ್ಟು ಕೀರ್ತಿ ಬರುತ್ತದೆ. ಮಕ್ಕಳು ಕಷ್ಟಪಟ್ಟು ಓದಿ ಜೀವನದಲ್ಲಿ ಗೆಲ್ಲಬೇಕು ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವಮಾನದಲ್ಲಿ ಒಂದು ಪ್ರಮುಖಘಟ್ಟ. ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಪಬ್ಲಿಕ್ ಪರೀಕ್ಷೆ ಆಯೋಜಿಸಿರುವುದರಿಂದ ಈ ಪರೀಕ್ಷೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ನೂರಕ್ಕೆ ನೂರು ಅಂಕ ಪಡೆಯಬೇಕೆಂಬ ಗುರಿಯನ್ನಿಟ್ಟುಕೊಂಡು ಪರೀಕ್ಷೆ ಬರೆಯಬೇಕು. 

ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ನಮ್ಮ ಶಿಕ್ಷಣ ವಲಯ ಉತ್ತಮ ಸಾಧನೆ ಗಳಿಸಬೇಕೆಂಬ ಮುಖ್ಯ ಉದ್ದೇಶದಿಂದ ಈ ಕಾರ್ಯಾಗಾರವನ್ನು ಏರ್ಪಡಿಸಿಲಾಗಿದೆ. ಇದರ ಪ್ರಯೋಜನವನ್ನು ಪಡೆದು ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಶುಭ ಹಾರೈಸಿದರು.

ಕಾರ್ಯಾಗಾರದಲ್ಲಿ ಬಿ.ಆರ್.ಸಿ ಮಹದೇವ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು, ಉಪಾಧ್ಯಕ್ಷ ಹರೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ್, ದೈಹಿಕ ಪರಿವೀಕ್ಷಕ ಉಮಾಶಂಕರ್, ಇಸಿಒ ವಿಜಯಕುಮಾರ್, ಅಸ್ಸಿಸಿ ಶಾಲೆಯ ಮುಖ್ಯ ಶಿಕ್ಷಕರು ಇಗ್ನಾಸಿ ಮುತ್ತು ವಿಷಯ ಶಿಕ್ಷಕರು ಇದ್ದರು.

ADVERTISEMENT
ಕೊಳ್ಳೇಗಾಲ ನಗರದ ಸಂತ ಫ್ರಾನ್ಸಿಸ್ ಅಸ್ಸಿಸಿ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರೇರಣಾ ಕಾರ್ಯಾಗಾರವನ್ನು ಇಒ ಗುರು ಶಾಂತಪ್ಪ ಬೆಳ್ಳುಂಡಗಿ ಉದ್ಘಾಟನೆ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.