
ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಡಿ.26ರಂದು ಗುಂಡ್ಲುಪೇಟೆಯ ಶಿಕ್ಷಕರ ಭವನದಲ್ಲಿ ರೈತ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಪ್ರವಾಸಿಮಂದಿರದಿಂದ ಶಿಕ್ಷಕರ ಭವನದವರೆಗೆ ರೈತರ ಮೆರವಣಿಗೆ ನಡೆಯಲಿದೆ. ನಂದಿಧ್ವಜ, ವೀರಗಾಸೆ, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಮಾಜಿ ಶಾಸಕ ನಿರಂಜನ ಕುಮಾರ್, ವೀರನಪುರ ನಾಗಪ್ಪ, ಹೊನ್ನೂರು ಬಸವಣ್ಣ, ಅಬ್ಬಾನಿ ಶಿವಪ್ಪನವರ, ತರಿಕೆರೆ ಮಹೇಶ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ರೈತ ದಿನಾಚರಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಪುಟ್ಟೇಗೌಡ, ಮೇಲಾಜಿಪುರ ಕುಮಾರ್, ವೀರನಪುರ ನಾಗಪ್ಪ, ಅಶೋಕ್, ಸುಂದ್ರಪ್ಪ, ಉಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.