ಹನೂರು (ಚಾಮರಾಜನಗರ): ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ (65) ಎಂಬುವವರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ.
ಅವರೊಂದಿಗಿದ್ದ ಕುರಿಯೊಂದನ್ನೂ ಚಿರತೆ ಕೊಂದಿದೆ.
ಇದೇ ಪ್ರದೇಶದಲ್ಲಿ ಈ ಹಿಂದೆ ಮೇಕೆಯೊಂದನ್ನು ಚಿರತೆ ಕೊಂದಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕೂಡಲೇ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.