ADVERTISEMENT

ಯಳಂದೂರು | ತೋಟಗಾರಿಕೆ ಇಲಾಖೆ ಕಚೇರಿಗೆ ರೈತರ ಮುತ್ತಿಗೆ

ಫಲಾನುಭವಿಗಳಿಗೆ ದಕ್ಕದ ಯೋಜನೆ ನೆರವು: ಆರೋಪ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 5:31 IST
Last Updated 11 ಸೆಪ್ಟೆಂಬರ್ 2025, 5:31 IST
ಯಳಂದೂರು ಪಟ್ಟಣದ ತೋಟಗಾರಿಕಾ ಇಲಾಖೆ ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದೆ ವಂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು 
ಯಳಂದೂರು ಪಟ್ಟಣದ ತೋಟಗಾರಿಕಾ ಇಲಾಖೆ ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡದೆ ವಂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು    

ಯಳಂದೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬುಧವಾರ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೌಡಹಳ್ಳಿ ಸೋಮಣ್ಣ ಮಾತನಾಡಿ, ‘ತಾಲ್ಲೂಕು ತೋಟಗಾರಿಕಾ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ. 2021ರಿಂದ ಸರಕಾರದ ಸವಲತ್ತುಗಳು ಉಳ್ಳವರ ಪಾಲಾಗುತ್ತಿದೆ. ತೆಂಗಿನ ಕಪ್ಪು ತಲೆ ಹುಳು ನಿಯಂತ್ರಣಕ್ಕೆ ಕ್ರಮವಹಿಸಿಲ್ಲ. ಇದರ ಬಗ್ಗೆ ಮಾಹಿತಿ ಇಲ್ಲ. ಕೃಷಿಹೊಂಡ, ಗ್ರೀನ್ ಹೌಸ್, ಪ್ಯಾಕ್ ಹೌಸ್, ಪಾಲಿಹೌಸ್, ಸೋಲಾರ್ ಪಂಪ್ ಸೆಟ್ ವಿತರಣೆಯ ಬಗ್ಗೆ ಮಾಹಿತಿ ಇಲ್ಲ. ಔಷಧ ವಿತರಣೆ, ಬೇವಿನ ಎಣ್ಣೆ, ಗೊಬ್ಬರ ಪಡೆದಿರುವ ಹಾಗೂ ನರೇಗಾ ಯೋಜನೆಯ ಫಲಾನುಭವಿಗಳ ಬಗ್ಗೆ ತಿಳಿದಿಲ್ಲ. ಅಧಿಕಾರಿಗಳು ರೈತರಿಗೆ ಸ್ಪಂದಿಸುತ್ತಿಲ್ಲ’ ಎಂದು ದೂರಿದರು.

ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಪ್ರಸಾದ್, ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಗುಂಡ್ಲುಪೇಟೆ ಪ್ರಭು, ಹನೂರು ಚಿಕ್ಕರಾಜ್, ಅಲ್ಕೆರೆ ಅಗ್ರಹಾರ ನಾಗರಾಜು ಮುಖಂಡರಾದ ಶಿವುಪ್ರಕಾಶ್, ಕಾಂತರಾಜ್, ಸಿದ್ದಪ್ಪ, ತಮ್ಮಣ್ಣ, ಪ್ರಭುಸ್ವಾಮಿ, ಸಿದ್ದರಾಜನಾಯಕ ಹಾಗೂ ಇತರರು ಹಾಜರಿದ್ದರು.

ADVERTISEMENT
ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕಿ 5 ದಿನಗಳಲ್ಲಿ ಫಲಾನುಭವಿಗಳ ವಿವಿರ ಹಾಗೂ ಸವಲತ್ತು ವಿತರಣೆ ಬಗ್ಗೆ ಪರಿಶೀಲನೆ ನಡೆಸಲಾಗುವುದು
ನಾಗರಾಜ್ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.