ADVERTISEMENT

ಚಾಮರಾಜನಗರದ ಆಲೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 15:29 IST
Last Updated 10 ಸೆಪ್ಟೆಂಬರ್ 2020, 15:29 IST
ನಾಗೇಂದ್ರ
ನಾಗೇಂದ್ರ   

ಚಾಮರಾಜನಗರ: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ರೈತರೊಬ್ಬರು ಬುಧವಾರ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮದ ನಿವಾಸಿ ನಾಗೇಂದ್ರ (44) ಆತ್ಮಹತ್ಯೆ ಮಾಡಿಕೊಂಡವರು. ವಿಜಯ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆದರೆ, ಎಷ್ಟು ಸಾಲ ಮಾಡಿದ್ದಾರೆ ಎಂಬ ಮಾಹಿತಿ ನೀಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ನಾಗೇಂದ್ರ ಅವರು ಕಬ್ಬು, ಅಡಿಕೆ, ತೆಂಗು ಬೆಳೆಯುತ್ತಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಬೆಳೆಗಳಿಗಾಗಿ ತಂದಿದ್ದ ಕ್ರಿಮಿನಾಶಕ ಸೇ‌ವಿಸಿದ್ದಾರೆ ಎಂದು ಗ್ರಾಮಸ್ಥರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ರಾಮಸಮುದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಬ್‌ ಇನ್‌ಸ್ಪೆಕ್ಟರ್‌ ತಾಜುದ್ದೀನ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.