ADVERTISEMENT

ಗುಂಡ್ಲುಪೇಟೆ: ರೈತ ಸಂಘ, ಹಸಿರು ಸೇನೆ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 17 ಮೇ 2025, 16:02 IST
Last Updated 17 ಮೇ 2025, 16:02 IST
ಗುಂಡ್ಲುಪೇಟೆ ತಾಲ್ಲೂಕಿನ ಮುಕ್ತಿ ಕಾಲೊನಿಯಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ ವೇಳೆ ಮಹಿಳೆಯರು ಸೇರ್ಪಡೆಯಾದರು. ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಭಾಗವಹಿಸಿದ್ದರು
ಗುಂಡ್ಲುಪೇಟೆ ತಾಲ್ಲೂಕಿನ ಮುಕ್ತಿ ಕಾಲೊನಿಯಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ ವೇಳೆ ಮಹಿಳೆಯರು ಸೇರ್ಪಡೆಯಾದರು. ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಭಾಗವಹಿಸಿದ್ದರು   

ಗುಂಡ್ಲುಪೇಟೆ: ತಾಲ್ಲೂಕಿನ ಮುಕ್ತಿ ಕಾಲೊನಿಯಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶ ಜನರು ರೈತ ಸಂಘಟನೆಯಲ್ಲಿ ತೊಡಗಿಕೊಂಡಾಗ ಮಾತ್ರ ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡಬಹುದು. ಇತ್ತೀಚೆಗಿನ ದಿನಗಳಲ್ಲಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಕೆ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಇದು ಮಾರಕವಾಗಿದೆ. ಆದ್ದರಿಂದ ಸಾವಯವ ಮತ್ತು ನೈಸರ್ಗಿಕ ಕೃಷಿಯತ್ತ ಹೆಚ್ಚು ಮಂದಿ ಮುಖ ಮಾಡಬೇಕು’ ಎಂದು ಸಲಹೆ ನೀಡಿದರು.

ಈ ವೇಳೆ ಮುಕ್ತಿ ಕಾಲೊನಿಯಲ್ಲಿ ಸುಮಾರು 30ಕ್ಕೂ ಅಧಿಕ ಮಹಿಳೆಯರು ರೈತ ಸಂಘಕ್ಕೆ ಸೇರ್ಪಡೆಗೊಂಡರು.

ADVERTISEMENT

ರೈತ ಮುಖಂಡರಾದ ಹಳ್ಳದಮಾದಹಳ್ಳಿ ಲೋಕೇಶ್, ಮಾಡ್ರಹಳ್ಳಿ ಪಾಪಣ್ಣ, ಕೂತನೂರು ಗಣೇಶ್, ರಾಜು ಭೀಮನಬೀಡು, ಕೋಡಹಳ್ಳಿ ಸ್ವಾಮಿ, ಮಾರಶೆಟ್ಟಿ, ಮಹೇಶ್, ಕೃಷ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.