ADVERTISEMENT

ಯಳಂದೂರು: ತಾಲ್ಲೂಕು ಕಚೇರಿ ಮುಂದೆ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 14:58 IST
Last Updated 2 ಜೂನ್ 2025, 14:58 IST
ಯಳಂದೂರು ತಾಲ್ಲೂಕು ಕಚೇರಿಯಲ್ಲಿ ಸೋಮವಾರ ರೈತ ಸಂಘದ ಪದಾಧಿಕಾರಿಗಳು ತಹಶಿಲ್ದಾರ್ ಬಸವರಾಜ್ ಅವರಿಗೆ ಮನವಿ ಸಲ್ಲಿಸಿದರು.
ಯಳಂದೂರು ತಾಲ್ಲೂಕು ಕಚೇರಿಯಲ್ಲಿ ಸೋಮವಾರ ರೈತ ಸಂಘದ ಪದಾಧಿಕಾರಿಗಳು ತಹಶಿಲ್ದಾರ್ ಬಸವರಾಜ್ ಅವರಿಗೆ ಮನವಿ ಸಲ್ಲಿಸಿದರು.   

ಯಳಂದೂರು: ಸಾಮೂಹಿಕ ನಾಯಕತ್ವದ ವತಿಯಿಂದ ಸೋಮವಾರ ರೈತ ಸಂಘದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹೊನ್ನೂರು ಪ್ರಕಾಶ್ ಮಾತನಾಡಿ, ‘ಜಿಲ್ಲಾ ರೈತ ಸಂಘ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳನ್ನು ಕೆಟ್ಟ ಪದ ಬಳಸಿ ಮಾತನಾಡಲಾಗಿದೆ ಎಂದು ನನ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ‌ದ್ದಾರೆ. ಕೆಟ್ಟ ಸಂಸ್ಕೃತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಬೆಳೆಸಿಕೊಂಡಿರಬಹುದು, ರೈತರಲ್ಲ. ಈ ಬಗ್ಗೆ ಅವರಿಗೆ ತಿಳಿ ಹೇಳಬೇಕು’ ಎಂದರು.

ಯಳಂದೂರು ತಾಲ್ಲೂಕು ಕಚೇರಿಯಲ್ಲಿ ಸೋಮವಾರ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಬಸವರಾಜ್ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.