ADVERTISEMENT

ಅಕ್ರಮ ಗಾಂಜಾ ಮಾರಾಟ: ತಂದೆ, ಮಗ ಬಂಧನ

ಖಚಿತ ಮಾಹಿತಿಯ ಮೇರೆಗೆ ಕೊಳ್ಳೇಗಾಲ ಠಾಣೆಯ ಇನ್‌ಸ್ಪೆಕ್ಟರ್‌ ರಾಜೇಂದ್ರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 11:31 IST
Last Updated 17 ಸೆಪ್ಟೆಂಬರ್ 2020, 11:31 IST
ನೀಲಸಿದ್ದಶೆಟ್ಟಿ, ಸೋಮಣ್ಣ
ನೀಲಸಿದ್ದಶೆಟ್ಟಿ, ಸೋಮಣ್ಣ   

ಕೊಳ್ಳೇಗಾಲ: ಅರ್ಧ ಕೆಜಿಯಷ್ಟು ಒಣ ಗಾಂಜಾ ಸಾಗಣೆ ಮಾಡುತ್ತಿದ್ದ ತಂದೆ ಹಾಗೂ ಮಗನನ್ನು ನಗರ ಪೊಲೀಸರು ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಬಂಧಿಸಿದ್ದಾರೆ.

ತಾಲ್ಲೂಕಿನ ಇಕ್ಕಡಹಳ್ಳಿ ಗ್ರಾಮದ ನೀಲಸಿದ್ದಶೆಟ್ಟಿ ಹಾಗೂ ಅವರ ಸೋಮಣ್ಣ ಬಂಧಿತರು. ಆರೋಪಿಗಳು 480 ಗ್ರಾಂ ಒಣ ಗಾಂಜಾವನ್ನು ಸಾಗಣೆ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ, ಕೊಳ್ಳೇಗಾಲ ಠಾಣೆಯ ಇನ್‌ಸ್ಪೆಕ್ಟರ್‌ ರಾಜೇಂದ್ರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.