ಸಂತೇಮರಹಳ್ಳಿ: ಪೋಷಕರೊಬ್ಬರು ತಮ್ಮ ಮಗನ ಹುಟ್ಟುಹಬ್ಬದ ಅಂಗವಾಗಿ, ಶಿಥಿಲಾವಸ್ಥೆ ತಲುಪಿದ್ದ ಸರ್ಕಾರಿ ಶಾಲಾ ಕಟ್ಟಡವನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ಮಾದರಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಸಾವಿರಾರು ರೂಪಾಯಿ ಖರ್ಚು ಮಾಡಿ, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ಇಲ್ಲಿ ಪೋಷಕರೊಬ್ಬರು ತಮ್ಮ ಮಗನ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯೊಂದಕ್ಕೆ ಸುಣ್ಣಬಣ್ಣ ಬಳಿಸಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ.
ಸಮೀಪದ ತೆಂಕಲಮೋಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೊಂಡಿತ್ತು. ಈ ಶಾಲೆಯಲ್ಲೇ ಮಕ್ಕಳು ಆತಂಕದಲ್ಲೇ ಪಾಠ ಕೇಳುವಂತಾಗಿತ್ತು. ಕುದೇರು ಗ್ರಾಮದ ಶಿವಣ್ಣ ಎಂಬುವರು ತಮ್ಮ ಮಗ ದ್ರುವಂತ್ ಹುಟ್ಟುಹಬ್ಬದ ಅಂಗವಾಗಿ ತೆಂಕಲಮೋಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ₹50 ಸಾವಿರ ಖರ್ಚು ಮಾಡಿ, ದುರಸ್ತಿಗೊಳಿಸಿ, ಸುಣ್ಣ ಬಣ್ಣ ಬಳಿಸಿ, ಹೊಸ ಕಟ್ಟಡವಾಗಿ ಕಾಣುವಂತೆ ಮಾಡಿದ್ದಾರೆ. ಇವರ ಮಾದರಿ ಕೆಲಸಕ್ಕೆ ಗ್ರಾಮಸ್ಥರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.