ಚಾಮರಾಜನಗರ: ಈಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಫೆನ್ಸಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಫೆನ್ಸಿಂಗ್ ಚಾಂಪಿಯನ್ ಶಿಪ್‌ನ ಸಬ್ ಜೂನಿಯರ್ ವಿಭಾಗದಲ್ಲಿ ಸಂತೇಮರಹಳ್ಳಿಯ ಖೇಲೋ ಇಂಡಿಯಾ ಸಂಸ್ಥೆಯ ವಿದ್ಯಾರ್ಥಿನಿ ಎನ್.ಕೃತಿಕಾ ಬೆಳ್ಳಿ ಪದಕ ಪಡೆದಿದ್ದಾರೆ.
ಸಂತೇಮರಹಳ್ಳಿಯ ಬಾಲು ಹೋಟೆಲ್ ಮಾಲೀಕ ಬಾಲು ಅವರ ಮೊಮ್ಮಗಳಾದ ಎನ್.ಕೃತಿಕಾ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಚಿನ ಪದಕ ಕೂಡ ಪಡೆದಿದ್ದರು ಎಂದು ಸಂಸ್ಥೆಯ ತರಬೇತುದಾರರಾದ ಗಜಾನಂದ್ ಹಾಗೂ ಪವನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.