ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಮೂರು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಪ್ರಕರಣಗಳ ಸಂಖ್ಯೆ 15ಕ್ಕೆ ಏರಿವೆ. ಯಾರೂ ಗುಣಮುಖರಾಗಿಲ್ಲ. ಸಾವು ಸಂಭವಿಸಿಲ್ಲ.
ಸೋಂಕಿತ 15 ಮಂದಿಯಲ್ಲಿ ಒಂಬತ್ತು ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ.
ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 6,950ಕ್ಕೆ ಏರಿದೆ. 6,803 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ.
ಭಾನುವಾರ 662 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 659 ಮಂದಿಯ ವರದಿ ನೆಗೆಟಿವ್ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.