
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 15 ಮಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರೊಂದಿಗೆ ಇದುವರೆಗೆ ವರದಿಯಾಗಿರುವ ಪ್ರಕರಣಗಳ ಸಂಖ್ಯೆ 6,439ಕ್ಕೆ ಏರಿದೆ.
ಒಂಬತ್ತು ಮಂದಿ ಗುಣಮುಖರಾಗಿದ್ದು, ಸೋಂಕು ಮುಕ್ತರಾದವರ ಸಂಖ್ಯೆ 6,210ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 100 ದಾಟಿದ್ದು, ಸದ್ಯ ಜಿಲ್ಲೆಯಲ್ಲಿ 101 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 38 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದರೆ, 16 ಮಂದಿ ಐಸಿಯುನಲ್ಲಿ ದಾಖಲಾಗಿದ್ದಾರೆ.
ಹೊಸದಾಗಿ ಸಾವಿನ ಪ್ರಕರಣ ವರದಿಯಾಗಿಲ್ಲ. 108 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಕೋವಿಡ್‌ಯೇತರ ಕಾರಣಗಳಿಂದಮೃತಪಟ್ಟಿದ್ದಾರೆ.
ಸೋಮವಾರ 429 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 417 ಮಂದಿಯ ವರದಿ ನೆಗೆಟಿವ್ ಬಂದಿವೆ. 12 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಮೂರು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.