ADVERTISEMENT

ಚಾಮರಾಜನಗರ: 54 ಹೊಸ ಪ್ರಕರಣ, 15 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 16:30 IST
Last Updated 27 ಅಕ್ಟೋಬರ್ 2020, 16:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 54 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 15 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ 5,852 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 5,407 ಮಂದಿ ಸೋಂಕು ಮುಕ್ತರಾಗಿದ್ದಾರೆ. 323 ಸಕ್ರಿಯ ಪ್ರಕರಣಗಳಿವೆ. 122 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 23 ಮಂದಿ ಐಸಿಯುನಲ್ಲಿದ್ದು, ಉಳಿದವರು ಕೋವಿಡ್‌ ಆಸ್ಪತ್ರೆ, ಕೇರ್‌ ಕೇಂದ್ರದಲ್ಲಿದ್ದಾರೆ.

103 ಮಂದಿ ಕೋವಿಡ್‌ ಕಾರಣದಿಂದ ಹಾಗೂ 19 ಮಂದಿ ಬೇರೆ ಕಾಯಿಲೆಗಳಿಂದಾಗಿ ಮೃತಪಟ್ಟಿದ್ದಾರೆ.

ADVERTISEMENT

ಮಂಗಳವಾರ 746 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ, 710 ಮಂದಿಯ ವರದಿ ನೆಗೆಟಿವ್‌ ಬಂದಿದೆ. 36 ಪ್ರಕರಣಗಳು ದೃಢಪಟ್ಟಿವೆ. 12 ಪ್ರಕರಣಗಳು ಮೈಸೂರು, ಐದು ಬೆಂಗಳೂರು ಹಾಗೂ ಉಡುಪಿಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇದುವರೆಗೆ 89928 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, 84,212 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.