
ಬೆಂಕಿ ಅವಘಡ
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ರಥದ ಬೀದಿಯಲ್ಲಿ ಈಚೆಗೆ ಅಗ್ನಿ ಅನಾಹುತದಿಂದ ಭಸ್ಮವಾದ ಪೆಟ್ಟಿಗೆ ಅಂಗಡಿಗಳ ಮಾಲೀಕರನ್ನು ಭಾನುವಾರ ರಾತ್ರಿ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ಮಾಡಿ ಸರ್ಕಾರದ ನೆರವು ಕಲ್ಪಿಸುವ ಭರವಸೆ ನೀಡಿದರು.
ಶಾಸಕ ಕೃಷ್ಣಮೂರ್ತಿ ಮಾತನಾಡಿ, ‘ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿರುವುದರಿಂದ ಅಂಗಡಿ ಮಾಲೀಕರು ಕಂಗೆಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ, ಆರ್ಥಿಕ ಸಹಾಯ ಒದಗಿಸುವ ಬಗ್ಗೆ ಮನವಿ ಸಲ್ಲಿಸಲಾಗುವುದು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಇರುವ ಅವಕಾಶಗಳ ಬಗ್ಗೆ ಮಾಹಿತಿ ಪಡೆದು ನೆರವು ಕಲ್ಪಿಸಲು ಶ್ರಮಿಸಲಾಗುವುದು’ ಎಂದು ಅವರು ಹೇಳಿದರು.
ಬೆಂಕಿ ಅವಘಡದಲ್ಲಿ ಅಂಗಡಿಗಳನ್ನು ಕಳೆದುಕೊಂಡ ಎಂಟು ಮಂದಿಗೆ ಶಾಸಕರು ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಚಂದ್ರು ಹಾಗೂ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.