ADVERTISEMENT

ಮಲೆಮಹದೇಶ್ವರ ವನ್ಯಧಾಮದಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 18:15 IST
Last Updated 16 ಏಪ್ರಿಲ್ 2019, 18:15 IST
ಮಲೆಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯದ ಬೆಟ್ಟದಲ್ಲಿ ಕಾಣಿಸಿಕೊಂಡಿರುವ ದಟ್ಟ ಹೊಗೆ
ಮಲೆಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯದ ಬೆಟ್ಟದಲ್ಲಿ ಕಾಣಿಸಿಕೊಂಡಿರುವ ದಟ್ಟ ಹೊಗೆ   

ಹನೂರು: ಮಲೆಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯದ ಕಾಂಚಳ್ಳಿ, ಪಚ್ಚೆದೊಡ್ಡಿ ಅರಣ್ಯದಲ್ಲಿ ಮಂಗಳವಾರ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಬರೋಡ ಬಂಡೆ ಬೆಟ್ಟ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಕಾಂಚಳ್ಳಿ ಪಚ್ಚೆದೊಡ್ಡಿ ಬಳಿ ಇರುವ ಬರೋಡ ಬಂಡೆ ಬೆಟ್ಟ ಕುರುಚಲು ಅರಣ್ಯ ಪ್ರದೇಶದಿಂದ ಕೂಡಿದ್ದು, ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ, ತೀವ್ರ ಬಿಸಿಲಿದ್ದ ಪರಿಣಾಮ ಬೆಂಕಿ ಇಡೀ ಬೆಟ್ಟವನ್ನೇ ಆವರಿಸಿದೆ. ಲಂಟಾನ, ಹುಲ್ಲುಗಾವಲಿನಿಂದಲೇ ಕೂಡಿರುವ ಬೆಟ್ಟದಲ್ಲಿ ಬೆಂಕಿಯ ಪ್ರಮಾಣ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಸಿಬ್ಬಂದಿ ಸ್ಥಳದಲ್ಲೇ ಬಿಡುಬಿಟ್ಟಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಬೆಂಕಿ ನಂದಿಸುವ ಪ್ರಯತ್ನ ಮಾಡಲಾಗಿದೆ. ಎಷ್ಟು ಪ್ರಮಾಣದ ಅರಣ್ಯ ಬೆಂಕಿಗೆ ಆಹುತಿಯಾಗಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಎಂದು ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.