ADVERTISEMENT

ರಾಶಿಭೋಳನ ಗುಡ್ಡಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 3:44 IST
Last Updated 1 ಮಾರ್ಚ್ 2021, 3:44 IST
ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಗ್ರಾಮದ ಬಳಿಯ ರಾಶಿಭೋಳನ ಗುಡ್ಡಕ್ಕೆ ಯಾರೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಉರಿಯುತ್ತಿರುವ ಕುರುಚಲು ಗಿಡಗಳು
ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಗ್ರಾಮದ ಬಳಿಯ ರಾಶಿಭೋಳನ ಗುಡ್ಡಕ್ಕೆ ಯಾರೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಉರಿಯುತ್ತಿರುವ ಕುರುಚಲು ಗಿಡಗಳು   

ಕೊಳ್ಳೇಗಾಲ: ತಾಲ್ಲೂಕಿನ ಜಾಗೇರಿ ಗ್ರಾಮದ ಬಳಿಯ ರಾಶಿಭೋಳನ ಗುಡ್ಡಕ್ಕೆ ಯಾರೂ ಕಿಡಿಗೇಡಿಗಳು ಭಾನುವಾರ ಬೆಂಕಿ ಹಚ್ಚಿದ್ದರಿಂದ ಸುಮಾರು 10 ಎಕರೆ ಕುರುಚಲು ಗಿಡಗಳು ಸುಟ್ಟು ಹೋಗಿವೆ.

ಭಾನುವಾರ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಸಿಬ್ಬಂದಿ ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾದರು ಬೆಂಕಿ ಇದಕ್ಕಿದ್ದಂತೆ ಹೆಚ್ಚಾದ ಪರಿಣಾಮ ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.