ADVERTISEMENT

ಚಾಮರಾಜನಗರದಲ್ಲಿ ‌ಮೊದಲ ಕೋವಿಡ್ ಪ್ರಕರಣ?

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 4:52 IST
Last Updated 9 ಜೂನ್ 2020, 4:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಾಮರಾಜನಗರ: ಇದುವರೆಗೂ ಹಸಿರು ವಲಯದಲ್ಲೇ ಇದ್ದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮೊದಲ ಕೋವಿಡ್-19 ಪ್ರಕರಣ ದೃಢವಾಗಿದೆ ಎಂದು ಹೇಳಲಾಗುತ್ತಿದೆ.

ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಜಿಲ್ಲಾಧಿಕಾರಿ ‌ಡಾ.ಎಂ.ಆರ್.ರವಿ ಅವರು ಬೆಳಿಗ್ಗೆ 10.30ಕ್ಕೆ‌ ಪತ್ರಿಕಾಗೋಷ್ಠಿ ಕರೆದಿದ್ದಾರೆ.

ಪುಣೆಯಿಂದ ಬಂದ ಯುವಕರೊಬ್ಬರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಹೆಸರು ದಾಖಲಿಸದೆ, ಜಿಲ್ಲಾಡಳಿತದಿಂದ ಅನುಮತಿ ಪಡೆಯದೇ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.