ಬಂಧನ
ಕೊಳ್ಳೇಗಾಲ: ತಾಲ್ಲೂಕಿನ ಸರಗೂರು ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ 5 ಮಂದಿಯನ್ನು ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗ್ರಾಮದ ಚಂದನ್, ಸಂತೋಷ್, ಮಂಜು, ಮಣಿಕಂಠ ಹಾಗಾ ಪುಟ್ಟಣ್ಣ ಬಂಧಿತರು.
ಪ್ರತಿನಿತ್ಯ ಗ್ರಾಮದ ಹೊರವಲಯದಲ್ಲಿ ಜೂಜಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಗಣೇಶ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಪಣಕಿಟ್ಟಿದ್ದ ₹ 12,500 ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ಠಾಣೆಯ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.