ADVERTISEMENT

ಚಾಮರಾಜನಗರ: ಐದು ಹೊಸ ಪ್ರಕರಣ, ಏಳು ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 16:51 IST
Last Updated 15 ಜನವರಿ 2021, 16:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ‌ಜಿಲ್ಲೆಯಲ್ಲಿ ಶುಕ್ರವಾರ ಐದು ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಒಂದು ಮೈಸೂರಿನಲ್ಲಿ ದೃಢಪಟ್ಟಿದೆ. ಏಳು ಮಂದಿ ಗುಣಮುಖರಾಗಿದ್ದಾರೆ. 40 ಸಕ್ರಿಯ ಪ್ರಕರಣಗಳಿವೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳಲ್ಲಿ 22 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೂ ಇಲ್ಲ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,854ಕ್ಕೆ ತಲುಪಿದೆ. ಗುಣಮುಖರಾದವರ ಸಂಖ್ಯೆ 6,683ಕ್ಕೆ ಹಿಗ್ಗಿದೆ.

ಶುಕ್ರವಾರ 330 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 326 ವರದಿಗಳು ನೆಗೆಟಿವ್‌ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.