ADVERTISEMENT

ಹನೂರು | ಕಲಗಚ್ಚು ಗುಡ್ಡದಲ್ಲಿ ಬೆಂಕಿ: ನೂರಾರು ಎಕರೆ ಬೆಂಕಿಗಾಹುತಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 7:37 IST
Last Updated 8 ಫೆಬ್ರುವರಿ 2026, 7:37 IST
ಹನೂರು ಕ್ಷೇತ್ರ ವ್ಯಾಪ್ತಿಯ ಇಕ್ಕಡಹಳ್ಳಿ ಬಳಿಯಿರುವ ಕಲಗಚ್ಚು ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು
ಹನೂರು ಕ್ಷೇತ್ರ ವ್ಯಾಪ್ತಿಯ ಇಕ್ಕಡಹಳ್ಳಿ ಬಳಿಯಿರುವ ಕಲಗಚ್ಚು ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು   

ಹನೂರು: ತಾಲ್ಲೂಕಿನ ಇಕ್ಕಡಹಳ್ಳಿ ಗ್ರಾಮದ ಸಮೀಪದ ಕಲಗಚ್ಚು ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ನೂರಾರು ಎಕರೆ ಗುಡ್ಡ ‌ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.

ಅರಣ್ಯ ಪ್ರದೇಶದಿಂದ ಹೊರಗಿರುವ ಗುಡ್ಡ ಕಂದಾಯ ಇಲಾಖೆಗೆ ಸೇರಿದ್ದಾಗಿದೆ. ಕಿಡಿಗೇಡಿಗಳು ಸಂಜೆ ವೇಳೆ ಗುಡ್ಡದ ಅಂಚಿಗೆ ಬೆಂಕಿ ಹಾಕಿರುವ ಅನುಮಾನ ವ್ಯಕ್ತವಾಗಿದೆ. ಅರಣ್ಯ ಇಲಾಖೆಗೆ ಮಾಹಿತಿ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ವನ್ಯಧಾಮದ ಹನೂರು ಬಫರ್ ವಲಯದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಅರ್ಧದಷ್ಟು ಗುಡ್ಡ ಸುಟ್ಟು ಹೋಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT