ಚಾಮರಾಜನಗರ: ರೈತರಾದ ಮಲ್ಲೇಶ್ (48) ಮತ್ತು ನಾಗೇಂದ್ರ (45) ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರದಲ್ಲಿ ಬುಧವಾರ ರಾತ್ರಿ ರಸ್ತೆಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೃತಪಟ್ಟರು.
ಮಳೆಗೆ ವಿದ್ಯುತ್ ಕಂಬದಿಂದ ತಂತಿ ಕಳಚಿಕೊಂಡು ಜೋತುಬಿದ್ದಿತ್ತು. ರೈತರಿಬ್ಬರೂ ಬೈಕ್‌ನಲ್ಲಿ ಹೋಗುವಾಗ ಅದರೊಳಗೆ ಸಿಲುಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟರು.
ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಸೆಸ್ಕ್ ಹಿರಿಯ ಅಧಿಕಾರಿಗಳು ಮೃತರ ಕುಟುಂಬಕ್ಕೆ ತಲಾ ₹5 ಲಕ್ಷದ ಪರಿಹಾರ ಚೆಕ್ ವಿತರಿಸಿದರು.
‘ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು, ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು, ಕರ್ತವ್ಯ ನಿರ್ಲಕ್ಷ್ಯ ತೋರಿದ ಸೆಸ್ಕ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.