ADVERTISEMENT

ಹನೂರು: ಮಾಜಿ ಯೋಧ ನಿಧನ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 15:09 IST
Last Updated 7 ನವೆಂಬರ್ 2019, 15:09 IST
ರಾಯಪ್ಪನ್‌
ರಾಯಪ್ಪನ್‌   

ಹನೂರು (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಮಾಜಿ ಯೋಧ ರಾಯಪ್ಪನ್ (75) ಅವರು ಹೃದಯಾಘಾತದಿಂದ ಬುಧವಾರ ನಿಧನರಾದರು.

ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಪಾಕಿಸ್ತಾನದೊಂದಿಗೆ 1965ರಲ್ಲಿ ಹಾಗೂ 1971ರಲ್ಲಿ (ಬಾಂಗ್ಲಾ ವಿಮೋಚನೆ) ನಡೆದಿದ್ದ ಯುದ್ಧಗಳಲ್ಲಿ ಭಾಗವಹಿಸಿದ್ದರು.

ರಾಯಪ್ಪನ್‌ ಅವರಿಗೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗ ಮಾರ್ಟಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಕ್ರಿಶ್ಚಿಯನ್‌ ರುದ್ರಭೂಮಿಯಲ್ಲಿ ನೆರವೇರಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.