ADVERTISEMENT

44 ಮಂದಿಗೆ ಸೋಂಕು, ಮೂರು ಸಾವು

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 4:52 IST
Last Updated 10 ಜುಲೈ 2021, 4:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 44 ಮಂದಿಗೆ ಕೋವಿಡ್‌ ದೃಢಪಟ್ಟಿದೆ. 53 ಮಂದಿ ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 456ಕ್ಕೆ ಇಳಿದಿದೆ. ಸೋಂಕಿತರಲ್ಲಿ 27 ಮಂದಿ ಐಸಿಯುನಲ್ಲಿ ಹಾಗೂ 24 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 31,276 ಮಂದಿಗೆ ಸೋಂಕು ದೃಢಪಟ್ಟಿದೆ. 30,308 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಶುಕ್ರವಾರ 1,396 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,353 ವರದಿಗಳು ನೆಗೆಟಿವ್‌ ಬಂದಿವೆ. 43 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತವು ಹಳೆದ ಒಂದು ಪ್ರಕರಣ ಸೇರಿದಂತೆ 44 ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.