ADVERTISEMENT

ಚಾಮರಾಜನಗರ: 46 ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 15:22 IST
Last Updated 16 ಸೆಪ್ಟೆಂಬರ್ 2021, 15:22 IST

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಐದು ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಆರು ಜನರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 46ಕ್ಕೆ ಇಳಿದಿದೆ. ಇಬ್ಬರು ಐಸಿಯುನಲ್ಲಿದ್ದು, 18 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,421ಕ್ಕೆ ಏರಿದೆ. 31,837 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ADVERTISEMENT

ಗುರುವಾರ 2,149 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 2,149 ಮಂದಿ‌ಯ ವರದಿ ನೆಗೆಟಿವ್‌ ಬಂದು, ಐವರಿಗೆ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.