ADVERTISEMENT

ಚಾಮರಾಜನಗರದಲ್ಲಿ 46 ಹೊಸ ಕೋವಿಡ್‌ ಪ್ರಕರಣ, 49 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 15:49 IST
Last Updated 9 ಸೆಪ್ಟೆಂಬರ್ 2020, 15:49 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 46 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 49 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಈವರೆಗೆ ದೃಢಪಟ್ಟ ಕೋವಿಡ್‌ ಸೋಂಕಿತರ ಸಂಖ್ಯೆ 2,771ಕ್ಕೆ ಏರಿದೆ. 2,200 ಮಂದಿ ಗುಣಮುಖರಾಗಿದ್ದಾರೆ. 515 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 161 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ 30 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ಕಾರಣದಿಂದ 39 ಹಾಗೂ ಅನ್ಯ ಕಾರಣಗಳಿಂದ 18 ಸೇರಿದಂತೆ ಒಟ್ಟು, 57 ಮಂದಿ ಸೋಂಕಿತರು ಇದುವರೆಗೆ ಮೃತಪಟ್ಟಿದ್ದಾರೆ.

ADVERTISEMENT

ಬುಧವಾರ ಜಿಲ್ಲೆಯಲ್ಲಿ 1,006 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 358, ರ‍್ಯಾ‍ಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ 648 ಪರೀಕ್ಷೆಗಳನ್ನು ನಡೆಸಲಾಗಿದೆ. 961 ಮಂದಿಯ ವರದಿಗಳು ನೆಗೆಟಿವ್‌ ಬಂದಿವೆ. 45 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಒಂದು ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ 48,020 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 45,265 ವರದಿಗಳು ನೆಗೆಟಿವ್‌ ಬಂದಿವೆ.

ಬುಧವಾರ ದೃಢಪಟ್ಟ 46 ಮಂದಿಯಲ್ಲಿ ಚಾಮರಾಜನಗರ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ತಲಾ 14, ಗುಂಡ್ಲುಪೇಟೆಯ 13, ಯಳಂದೂರು ಮತ್ತು ಹನೂರು ತಾಲ್ಲೂಕುಗಳ ತಲಾ ಇಬ್ಬರು, ಹೊರ ಜಿಲ್ಲೆಯ ಒಬ್ಬರು ಇದ್ದಾರೆ.

ಗುಣಮುಖರಾದವರಲ್ಲಿ ಚಾಮರಾಜನಗರ ತಾಲ್ಲೂಕಿನ 23, ಕೊಳ್ಳೇಗಾಲದ 12, ಗುಂಡ್ಲುಪೇಟೆಯ ಒಂಬತ್ತು, ಯಳಂದೂರಿನ ನಾಲ್ವರು ಹಾಗೂ ಹನೂರಿನ ಒಬ್ಬರು ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.