ADVERTISEMENT

43 ಹೊಸ ಪ್ರಕರಣ, 69 ಮಂದಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 2:10 IST
Last Updated 3 ಜುಲೈ 2021, 2:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 43 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 69 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 555ಕ್ಕೆ ಇಳಿದಿದೆ. ಈ ಪೈಕಿ 29 ಮಂದಿ ಐಸಿಯುನಲ್ಲಿ, 33 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 30,944ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 29,887ಕ್ಕೆ ಹಿಗ್ಗಿದೆ.

ಶುಕ್ರವಾರ 1,313 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,260 ವರದಿಗಳು ನೆಗೆಟಿವ್‌ ಬಂದಿವೆ. 53 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಜಿಲ್ಲಾಡಳಿತ ತನ್ನ ವರದಿಯಲ್ಲಿ 43 ಪ್ರಕರಣಗಳನ್ನು ಮಾತ್ರ ಉಲ್ಲೇಖಿಸಿದೆ.

ADVERTISEMENT

43 ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 17, ಗುಂಡ್ಲುಪೇಟೆಯ ಮೂವರು, ಕೊಳ್ಳೇಗಾಲದ ಆರು, ಹನೂರಿನ 15, ಯಳಂದೂರು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.

ಚೇತರಿಕೆ ಕಂಡ 69 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನವರು 32 ಮಂದಿ ಇದ್ದಾರೆ. ಉಳಿದಂತೆ ಗುಂಡ್ಲುಪೇಟೆಯ 14, ಕೊಳ್ಳೇಗಾಲದ ಏಳು, ಹನೂರಿನ 15 ಮತ್ತು ಯಳಂದೂರು ತಾಲ್ಲೂಕಿನ ಒಬ್ಬರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.