ಚಾಮರಾಜನಗರ ತಾಲ್ಲೂಕಿನ ರೇಚಂಬಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಗುದ್ದಲಿ ಪೂಜೆ ನೆರವೇರಿಸಿದರು.
ಚಾಮರಾಜನಗರ: ತಾಲ್ಲೂಕಿನ ರೇಚಂಬಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಗುದ್ದಲಿ ಪೂಜೆ ನೆರವೇರಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ₹ 10 ಲಕ್ಷ ಬಿಡುಗಡೆ ಯಾಗಿದ್ದು ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ₹ 7 ಲಕ್ಷ ಮಂಜೂರಾಗಿದೆ ಎಂದು ಶಾಸಕರು ತಿಳಿಸಿದರು.
ಇದೇವೇಳೆ ಎನ್‌ಎಸ್‌ಯುಐ ವತಿಯಿಂದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭದ್ರಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಬಸವರಾಜು, ಮಹದೇವಸ್ವಾಮಿ, ಶಿವಪಾದ, ಮಾಜಿ ಅಧ್ಯಕ್ಷ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವಪ್ಪ, ಕೆಆರ್‌ಐಡಿಎಲ್ ಇಇ ಮಹದೇವಶೆಟ್ಟಿ, ನಿರ್ಮಿತಿ ಕೇಂದ್ರದ ಎಂಜಿನಿಯರ್ ನಂದೀಶ್, ಯಜಮಾನರಾದ ಪುಟ್ಟಸ್ವಾಮಿ, ಮರಿರಾಚಯ್ಯ, ನಂಜಯ್ಯ, ಪುಟ್ಟಯ್ಯ, ರವಿ, ಅಂಬೇಡ್ಕರ್ ಸಂಘದ ಅಧ್ತಕ್ಷ ಮಣಿ, ಉಪಾಧ್ಯಕ್ಷ ಶೇಖರ್, ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದರ್ಶನ್, ಜಿಲ್ಲಾಧ್ಯಕ್ಷ ಮೋಹನ್ ನಗು, ಉಪಾಧ್ಹಕ್ಷ ಮುತ್ತರಾಮು, ನವೀನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.