ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.
ಸೋಂಕಿತರ ಸಂಖ್ಯೆ 44ಕ್ಕೆ ಇಳಿದಿದೆ. ಇಬ್ಬರು ಐಸಿಯುನಲ್ಲಿದ್ದು, 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 32,425 ಮಂದಿಗೆ ಸೋಂಕು ತಗುಲಿದೆ. 31,843 ಮಂದಿ ಗುಣಮುಖರಾಗಿದ್ದಾರೆ.
ಶುಕ್ರವಾರ 2,023 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 2,019 ಮಂದಿಯ ವರದಿ ನೆಗೆಟಿವ್ ಬಂದು, ನಾಲ್ವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.