ಚಾಮರಾಜನಗರ: ಮೈಸೂರು, ಚಾಮರಾಜನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ ಬುಡಕಟ್ಟು ಸಮುದಾಯದವರಿಗೂ ಉಚಿತ ಹಾಲು ಪೂರೈಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದರು.
ಜೇನು ಕುರುಬ, ಕಾಡು ಕುರುಬ ಹಾಗೂ ಸೋಲಿಗ ಸಮುದಾಯವರೂ ಕಷ್ಟಪಡುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬಂದಿದೆ. ಈ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣದಲ್ಲಿದೆ. ದಿನೇ ದಿನೇ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಶ್ರೀರಾಮುಲು ಹೇಳಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.