ADVERTISEMENT

ಚಾಮರಾಜನಗರ: ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಜಿ. ತಗತ್ ನಿಧನ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 5:11 IST
Last Updated 11 ಅಕ್ಟೋಬರ್ 2022, 5:11 IST
ಲಲಿತಾ ಜಿ.ತಗತ್
ಲಲಿತಾ ಜಿ.ತಗತ್   

ಚಾಮರಾಜನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ನಗರದ‌ ನಿವಾಸಿ ಲಲಿತಾ ಜಿ.ತಗತ್ (90) ಅವರು ಸೋಮವಾರ ರಾತ್ರಿ ನಿಧನರಾದರು.

ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ತಮ್ಮ 14ನೇ ವರ್ಷದಲ್ಲಿ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿದ್ದರು. 1947ರಲ್ಲಿ ಸ್ವಾತಂತ್ರ್ಯ ಘೋಷಣೆಗೂ ಮುನ್ನ ‌ಮೈಸೂರಿನಲ್ಲಿ ನಡೆದ ಚಳವಳಿಯಲ್ಲಿ ಭಾಗವಹಿಸಿ ಜೈಲು ಸೇರಿದ್ದರು.

ಮೃತರ ಅಂತ್ಯಕ್ರಿಯೆ ನಗರದ ಶಂಕರ ರುದ್ರಭೂಮಿಯಲ್ಲಿ ಮಧ್ಯಾಹ್ನ 1.30ಕ್ಕೆ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ADVERTISEMENT

ಅಂತಿಮ ದರ್ಶನ: ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರು ಲಲಿತಾ ಜಿ.ತಗತ್ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.