ಬಂಧನ (ಸಾಂದರ್ಭಿಕ ಚಿತ್ರ)
ಸಂತೇಮರಹಳ್ಳಿ: ಸಮೀಪದ ಬಾಗಳಿ ಗ್ರಾಮದಲ್ಲಿ ಜೂಜಾಡುತ್ತಿದ್ದ ಐವರು ಆರೋಪಿಗಳನ್ನು ಕುದೇರು ಠಾಣೆ ಪೋಲೀಸರು ಭಾನುವಾರ ಬಂಧಿಸಿದ್ದಾರೆ.
ಗ್ರಾಮದ ಜಮೀನೊಂದರಲ್ಲಿ ಜೂಜಾಡುತ್ತಿದ್ದ ಖಚಿತ ಮಾಹಿತಿ ಆಧಾರದ ಮೇರೆಗೆ ಪಿಎಸ್‌ಐ ಕುಮುದಾ, ಸಿಬ್ಬಂದಿ ರವಿ, ಉಮೇಶ್, ವಿಜಯಕುಮಾರ್ ಅವರು ದಾಳಿ ನಡೆಸಿದ್ದಾರೆ. ಈ ವೇಳೆಯಲ್ಲಿ ಪಣಕೆ ಇಟ್ಟಿದ ₹5,500 ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕುದೇರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.