ADVERTISEMENT

ಕೊಳ್ಳೇಗಾಲ | ಜೂಜಾಡುತ್ತಿದ್ದ ಆರು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 14:22 IST
Last Updated 21 ಜೂನ್ 2025, 14:22 IST
<div class="paragraphs"><p>ಬಂಧನ </p></div>

ಬಂಧನ

   

ಕೊಳ್ಳೇಗಾಲ: ತಾಲ್ಲೂಕಿನ ಬಾಣೂರು ಗ್ರಾಮದ ಕೆರೆಯ ಏರಿಯ ಮೇಲೆ ಜೂಜಾಡುತ್ತಿದ್ದ 6 ಮಂದಿಯನ್ನು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಗ್ರಾಮದ ಆನಂದ, ರವಿ, ಕೆಂಪರಾಜು, ರಾಜು, ಸುರೇಶ್, ಆನಂದ ಬಂಧಿತ ಆರೋಪಿಗಳು.

ಇವರು ನಿತ್ಯವು ಗ್ರಾಮದ ಕೆರೆ ಏರಿ ಮೇಲೆ ಅಕ್ರಮವಾಗಿ ಜೂಜಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಸುಪ್ರೀತ್ ಸಿಬ್ಬಂದಿ ಜತೆ ದಾಳಿ ನಡೆಸಿ, ಜೂಜುಕೋರರು ಪಣಕ್ಕಿಟ್ಟಿದ್ದ ₹3,870 ನಗದು ವಶಪಡಿಸಿಕೊಂಡಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಠಾಣಾ ಜಮೀನು ಮೇಲೆ ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT