ಕಾಂಗ್ರೆಸ್
ಗುಂಡ್ಲುಪೇಟೆ: ‘ಕ್ಷೇತ್ರದ ಶಾಸಕ ಗಣೇಶಪ್ರಸಾದ್ ಅವರನ್ನು ದಲಿತ ವಿರೋಧಿ ಎಂದು ಬಿಂಬಿಸುತ್ತಿರುವ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ನಿಜವಾದ ದಲಿತರ ವಿರೋಧಿ’ ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಆರ್. ಲಕ್ಕೂರು ಆರೋಪಿಸಿದರು.
‘ಕ್ಷೇತ್ರದಲ್ಲಿ 2018ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ದಲಿತರ ಪರ ಒಲವು ತೋರದ ನಿರಂಜನಕುಮಾರ್, ಸೋತ ನಂತರ ದಲಿತರ ಬಗ್ಗೆ ಮೃಧು ಮನೋಭಾವ ತಾಳಿದ್ದಾರೆ. ಸುಮ್ಮನೆ ಶಾಸಕರಿಗೆ ದಲಿತ ವಿರೋಧಿ ಎಂಬ ಪಟ್ಟ ಕಟ್ಟಲು ಹಿಂಬಾಲಕರ ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ’ ಎಂದರು.
‘ಹನುಮ ಜಯಂತಿ ಕಾರ್ಯಕ್ರಮಕ್ಕೆ ಗೈರಾದರು ಎಂಬ ನೆಪವೊಡ್ಡಿ ಹಿಂದೂ ವಿರೋಧಿ ಪಟ್ಟ ಕಟ್ಟುವುದು ಸರಿಯಲ್ಲ. ಗಣೇಶಪ್ರಸಾದ್ ತಮ್ಮ ಅವಧಿಯಲ್ಲಿ ಬೊಮ್ಮನಹಳ್ಳಿಯಲ್ಲಿ ಅಂಬೇಡ್ಕರ್ ವಸತಿ ಶಾಲೆ ಮಂಜೂರು ಮಾಡಿಸಿ, ದಲಿತ ಕೇರಿಗಳಿಗೆ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಸಮುದಾಯ ಭವನ, ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುದಾನ ಸೇರಿದಂತೆ ದಲಿತರ ಏಳಿಗೆಗೆ ವೈಯಕ್ತಿಕ ಸಹಾಯ ಮಾಡಿದ್ದಾರೆ. ಅಷ್ಟೇ ಅಲ್ಲದೆ ದಲಿತರಿಗೆ ರಾಜಕೀಯವಾಗಿಯೂ ಸ್ಥಾನಮಾನ ನೀಡಲು ಮುಂದಾಗಿದ್ದಾರೆ’ ಎಂದು ಪ್ರಕಟಣೆಯಲ್ಲಿ ಸ್ಪಷ್ಪಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.