ಹನೂರು: ಮನೆ ಬಾಗಿಲಲ್ಲಿಯೇ ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚಿ ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಗೆ ಶಾಸಕ ಎಂ. ಆರ್. ಮಂಜುನಾಥ್ ಚಾಲನೆ ನೀಡಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಸ್ವತಃ ಆರೋಗ್ಯ ತಪಾಸಣೆ ಮಾಡಿಸಿ , ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು,
ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಮನೆ ಮನೆಗೆ ಬಂದಾಗ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಮಸ್ಯೆಗಳಿದ್ದಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳನ್ನು ಪಡೆದುಕೊಳ್ಳಬೇಕು ಎಂದರು.
ತಾಲ್ಲೂಕು ಪ್ರಭಾರ ವೈದ್ಯಾಧಿಕಾರಿ ಡಾ ಪ್ರಕಾಶ್ ಮಾತನಾಡಿ, ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ 14 ಸಾಂಕ್ರಾಮಿಕ ರೋಗಗಳಿಗೆ ತಪಾಸಣೆ ನಡೆಸಿ ಸಮಾಲೋಚನೆ , ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಡಾ. ಉಲ್ಲಾಸ್, ಸಿಎಚ್ಒ ಸಂತೋಷ್ ಮಂಜುನಾಥ್, ಎಚ್.ಐ.ಒ, ನಿಂಬೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.