ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಮಲತಂದೆ ಬಂಧನ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 11:04 IST
Last Updated 10 ಫೆಬ್ರುವರಿ 2020, 11:04 IST

ಚಾಮರಾಜನಗರ: ಹನ್ನೊಂದೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಮಲತಂದೆಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಯು ಬಾಲಕಿ ಮೇಲೆ ಮೂರ್ನಾಲ್ಕು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ADVERTISEMENT

‘ಬಾಲಕಿ ತಾಯಿ ನೀಡಿರುವ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ’ ಎಂದು ಇನ್‌ಸ್ಪೆಕ್ಟರ್‌ ಎನ್‌.ಸಿ.ನಾಗೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.