ಬಂಧನ (ಸಾಂದರ್ಭಿಕ ಚಿತ್ರ)
ಚಾಮರಾಜನಗರ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಹನೂರು ತಾಲ್ಲೂಕಿನ ಗೋಡೇಸ್ ನಗರದ ತಂಗರಾಜು ಅಲಿಯಾಸ್ ಆರೋಗ್ಯಸ್ವಾಮಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಬಾಲಕಿಯ ಅಪಹರಣ ಹಾಗೂ ಕೊಲೆ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಮನೋಜ್ ಕುಮಾರ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ್ದಾರಿಂದ ಅಪ್ರಾಪ್ತೆಯ ಅಪಹರಣಕ್ಕೆ 5 ವರ್ಷ ಶಿಕ್ಷೆ, 5000 ದಂಡ ಹಾಗೂ ಕೊಲೆ ಮಾಡಿದ್ದಕ್ಕೆ ಜೀವಾವಧಿ ಶಿಕ್ಷೆ ಹಾಗೂ 25000 ದಂಡ ವಿಧಿಸಿ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ಆದೇಶ ನೀಡಿದ್ದಾರೆ. ದಂಡದಲ್ಲಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ 25000 ಪರಿಹಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 5 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.