ADVERTISEMENT

ಮಹದೇಶ್ವರ ಬೆಟ್ಟದಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 17 ಮೇ 2020, 15:04 IST
Last Updated 17 ಮೇ 2020, 15:04 IST
ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಸಂಜೆ ಸುರಿದ ಮಳೆಯ ನೋಟ
ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಸಂಜೆ ಸುರಿದ ಮಳೆಯ ನೋಟ   

ಚಾಮರಾಜನಗರ: ಜಿಲ್ಲೆಯ ಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾನುವಾರ ಸಂಜೆ ಮಳೆಯಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ಸಂಜೆ 6 ಗಂಟೆಗೆ ಅರ್ಧಗಂಟೆ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಹನೂರು ಭಾಗದಲ್ಲಿ ಗಾಳಿ ಸಹಿತ ಮಳೆ ಬಿದ್ದಿದೆ. ಕೊಳ್ಳೇಗಾಲ, ಯಳಂದೂರು ತಾಲ್ಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ಬಿಳಿಗಿರಿರಂಗನಬೆಟ್ಟದಲ್ಲಿ ಅರ್ಧ ಗಂಟೆಕಾಲ ವ‌ರ್ಷಧಾರೆಯಾಗಿದೆ.

ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.