ಚಾಮರಾಜನಗರ: ಜಿಲ್ಲೆಯಾದ್ಯಂತ ಮಳೆಯ ಸಿಂಚನ ಮುಂದುವರೆದಿದೆ.ಜಿಲ್ಲಾ ಕೇಂದ್ರ ಚಾಮರಾಜನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಶನಿವಾರವೂ ಮಳೆ ಮುಂದುವರೆದಿದೆ.
ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಳೆ, ಒಂದು ಕಾಲು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಕೊಳ್ಳೇಗಾಲ, ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಬಿದ್ದಿದೆ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ 6.5 ಸೆಂ.ಮೀ ಮಳೆಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಕೂತನೂರಿನಲ್ಲಿ 7.3 ಸೆಂ.ಮೀ ಮಳೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. 21ನೇ ತಾರೀಖಿನವರೆಗೂ ತುಂತುರಿನಿಂದ ಹಿಡಿದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.