ADVERTISEMENT

ಚಾಮರಾಜನಗರ, ಯಳಂದೂರಿನಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 16:22 IST
Last Updated 29 ಜುಲೈ 2020, 16:22 IST
ಚಾಮರಾಜನಗರದ ಸೋಮವಾರಪೇಟೆಯ ಸತ್ಯಮಂಗಲ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯಿತು
ಚಾಮರಾಜನಗರದ ಸೋಮವಾರಪೇಟೆಯ ಸತ್ಯಮಂಗಲ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯಿತು   

ಚಾಮರಾಜನಗರ: ಯಳಂದೂರು ಹಾಗೂ ಚಾಮರಾಜನಗರ ತಾಲ್ಲೂಕುಗಳಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದೆ. ಕೊಳ್ಳೇಗಾಲ, ಹನೂರು ತಾಲ್ಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಭಾಗದಲ್ಲಿ ವರ್ಷಧಾರೆಯಾಗಿದೆ.

ಜಿಲ್ಲೆಯಾದ್ಯಂತ ಬುಧವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಆದರೆ. ಮಧ್ಯಾಹ್ನದ ವರೆಗೂ ಮಳೆಯಾಗಿರಲಿಲ್ಲ.

ಜಿಲ್ಲಾ ಕೇಂದ್ರದಲ್ಲಿ ಸಂಜೆ 5.30ಕ್ಕೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಿನಿಂದ ಸುರಿದು, ನಂತರ ರಾತ್ರಿವರೆಗೂ ಜಿಟಿ ಜಿಟಿಯಾಗಿ ಸುರಿಯಿತು.

ADVERTISEMENT

ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿ, ಹರವೆ ಹೋಬಳಿಗಳಲ್ಲಿ ಉತ್ತಮ ವರ್ಷಧಾರೆಯಾಗಿದೆ. ಹರವೆ ಹೋಬಳಿಯಲ್ಲಿ 5.5 ಸೆಂ.ಮೀ ಮಳೆ ಸುರಿದಿದೆ. ಮಲೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7.5 ಸೆಂ.ಮೀ ಮಳೆ ಬಿದ್ದಿದೆ.

ನಗರದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದರಿಂದ ಚರಂಡಿಗಳು ಉಕ್ಕಿ ಹರಿದವು. ನೀರು ರಸ್ತೆಯ ಮೇಲೆ ಹರಿದು ಜನ ಸಂಚಾರಕ್ಕೆ ತೊಡಕಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.