ADVERTISEMENT

ಚಾಮರಾಜನಗರ: ಜಿಲ್ಲೆಯ ವಿವಿಧ ಕಡೆ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 6:22 IST
Last Updated 27 ಮಾರ್ಚ್ 2023, 6:22 IST

ಚಾಮರಾಜನಗರ: ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆಯಾಗಿದೆ.

ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಕ್ಕಾಲು ಗಂಟೆಗೂ ಹೆಚ್ಚು ಹೊತ್ತು ಉತ್ತಮವಾಗಿ ಮಳೆ ಸುರಿದಿದೆ. ಸಂತೇಮರಹಳ್ಳಿ ವ್ಯಾಪ್ತಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಯಳಂದೂರು ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20 ನಿಮಿಷಗಳಿಗೂ ಹೆಚ್ಚು ಸಮಯ ವರ್ಷಧಾರೆಯಾಗಿದೆ.

ಜಿಲ್ಲೆಯಲ್ಲಿ ಎರಡು ವಾರಗಳಿಂದ ಸಂಜೆ ಹೊತ್ತು ಮೋಡ ಕವಿದ ವಾತಾವರಣ ಇದ್ದರೂ ಉತ್ತಮ ಮಳೆಯಾಗಿರಲಿಲ್ಲ. ಚದುರಿದಂತೆ ಅಲ್ಲಲ್ಲಿ ಮಳೆ ಸುರಿದಿತ್ತು. ಭಾನುವಾರದ ಮಳೆ ಉತ್ತಮವಾಗಿ ಬಂದಿರುವುದರಿಂದ ವಾತಾವರಣ ತಂಪೆರೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.